HEALTH TIPS

ನವೋದ್ಯಮಗಳಲ್ಲಿ ಯುವ ಜನತೆಗೆ ಉದ್ಯೋಗಾವಕಾಶ ಒದಗಿಸಲಾಗುತ್ತಿದೆ: ಪ್ರಧಾನಿ ಮೋದಿ

             ವದೆಹಲಿ: ಅಭಿವೃದ್ಧಿಯತ್ತ ಸಾಗುತ್ತಿರುವ ರಕ್ಷಣಾ ವಲಯ, ನವೀಕರಿಸಬಹುದಾದ ಶಕ್ತಿ ಸಂಪನ್ಮೂಲ ವಲಯ ಹಾಗೂ ಸಾಂಪ್ರದಾಯಿಕ ಕ್ಷೇತ್ರಗಳನ್ನೂ ಒಳಗೊಂಡತೆ ವಿವಿಧ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರವು ಉದ್ಯೋಗಾವಕಾಶಗಳನ್ನು ಒದಗಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

           ಪ್ರಧಾನಿ ಅವರು ವರ್ಚುವಲ್ ವೇದಿಕೆ ಮೂಲಕ ಕೇಂದ್ರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸುಮಾರು 51 ಸಾವಿರ ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ್ದಾರೆ.

             'ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಕಳೆದ ವರ್ಷದ ಅಕ್ಟೋಬರ್‌ನಿಂದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಲಕ್ಷಾಂತರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸಲಾಗಿವೆ ' ಎಂದು ತಿಳಿಸಿದ್ದಾರೆ.

'ಯುವಕರಿಗೆ ಉದ್ಯೋಗಗಳನ್ನು ಕಲ್ಪಿಸಲು ಹಾಗೂ ಅವರ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.

                'ಇತ್ತೀಚಿನ ದಿನಗಳಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾಗಿದ್ದು, ಶಿಕ್ಷಣದ ಜತೆ ಜತೆಯಲ್ಲಿ ವಿದ್ಯಾರ್ಥಿಗಳಲ್ಲಿ ಕೌಶಲ್ಯ ರೂಪಿಸುವಂತಹ ವಿಷಯಗಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಭಾರತದ ದೃಷ್ಟಿಕೋನ ಹಾಗೂ ಪ್ರಗತಿಯತ್ತ ಸಾಗುತ್ತಿರುವ ರೀತಿಯು ಹೊಸ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ' ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries