HEALTH TIPS

ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿ ಬಾಗ್ಚಿ

               ವದೆಹಲಿ : ವಿದೇಶಾಂಗ ಸಚಿವಾಲಯದ ವಕ್ತಾರರಾಗಿದ್ದ ಅರಿಂದಮ್‌ ಬಾಗ್ಚಿ ಅವರನ್ನು ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿಯಾಗಿ ಕೇಂದ್ರ ಸರ್ಕಾರವು ನೇಮಕ ಮಾಡಿದೆ.

               1995ನೇ ತಂಡದ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಬಾಗ್ಚಿ ಅವರು ಮಾರ್ಚ್‌ 2020ರಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾಗಿದ್ದು, ಕೋವಿಡ್‌-19 ಸಂದರ್ಭ, ಭಾರತದ ಅಧ್ಯಕ್ಷತೆಯಲ್ಲಿ ನಡೆದಿದ್ದ ಜಿ20 ಶೃಂಗಸಭೆ, ಪೂರ್ವ ಈಶಾನ್ಯ ಗಡಿವಿವಾದ ಸಂದರ್ಭಗಳನ್ನು ನಿಭಾಯಿಸಿದ್ದರು.

                ಜಿನೀವಾದಲ್ಲಿ ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿ ಅವರು ಶೀಘ್ರದಲ್ಲಿಯೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ. ಬಾಗ್ಚಿ ಈ ಹಿಂದೆ ಕ್ರೊವೇಷಿಯಾದಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries