ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಖ್ಯೆ 49, ಕಲಾ ವಿಜ್ಞಾನ ವಿಭಾಗದ ನೇತೃತ್ವದಲ್ಲಿ "ಮೇರಿ ಮಾಟಿ ಮೇರಾ ದೇಶ್" ಅಮೃತ ಕಲಶ ಯಾತ್ರೆಗೆ ಬುಧವಾರ ಚಾಲನೆ ನೀಡಲಾಯಿತು.
ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಕಾವ್ಯ ಚಂದ್ರನ್ ಮಾರ್ಗದರ್ಶನ ನೀಡಿದರು.ಎನ್ನೆಸ್ಸೆಸ್ ಸ್ವಯಂಸೇವಕರು ತಮ್ಮ ಮನೆಗಳಿಂದ ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ಅಮೃತ ಕಲಶದಲ್ಲಿ ಠೇವಣಿ ಮಾಡುವ ಮೂಲಕ ಯೋಜನೆಯ ಭಾಗವಾದರು. ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸ್ವಾತಂತ್ರ್ಯ ಹೋರಾಟದ ಬಗ್ಗೆ ಸ್ವಯಂಸೇವಕರಿಗೆ ತಿಳುವಳಿಕೆ ಮೂಡಿಸಲು ಆಯೋಜಿಸಲಾದ ಕಾರ್ಯಕ್ರಮದ ಕೊನೆಯ ಭಾಗ "ಅಮೃತ ವಾಟಿಕ" ದ ಭಾಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.