ಎರ್ನಾಕುಳಂ: ಶಬರಿಮಲೆ ಮಂಡಲಕಾಲ ಯಾತ್ರೆ ಆರಂಭವಾಗುವ ಮುನ್ನವೇ ಶಬರಿಮಲೆ ಯಾತ್ರಿಕೆ ವಾಹನಕ್ಕೆ ಸಂಬಂಧಿಸಿ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲಂಕೃತ ವಾಹನಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಹಿಂದಿನ ಆದೇಶದಲ್ಲಿನ ಸೂಚನೆಗಳನ್ನು ಸರಿಯಾಗಿ ಜಾರಿಗೊಳಿಸಬೇಕು ಎಂದೂ ನ್ಯಾಯಾಲಯ ಸೂಚಿಸಿದೆ.
ಕೆ ಎಸ್ ಆರ್ ಟಿ ಸಿ ಬಸ್‍ಗಳು ಸೇರಿದಂತೆ ಸುರಕ್ಷತಾ ಮಾನದಂಡಗಳಿಗೆ ವಿರುದ್ಧವಾಗಿ ಯಾವುದೇ ಅಲಂಕಾರ ಮಾಡುವಂತಲ್ಲ. ಹೈಕೋರ್ಟ್ ಆದೇಶವನ್ನು ಪಾಲಿಸದೆ ಸಿಂಗಾರಗೊಂಡಿರುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ವೈದ್ಯಕೀಯ ಶಿಬಿರವನ್ನು ಜನರಲ್ ಆಸ್ಪತ್ರೆಯಿಂದ ಸ್ಥಳಾಂತರಿಸುವ ಶಿಫಾರಸಿನ ಕುರಿತು ನಿರ್ಧಾರ ಕೈಗೊಳ್ಳುವಂತೆ ಆರೋಗ್ಯ ಸೇವೆಗಳ ನಿರ್ದೇಶಕರಿಗೆ ನ್ಯಾಯಾಲಯ ಸೂಚಿಸಿದೆ. ಆಫ್ ರೋಡ್ ಆಂಬ್ಯುಲೆನ್ಸ್ ಸೇರಿದಂತೆ ಎರಡು ಆಂಬ್ಯುಲೆನ್ಸ್ ಲಭ್ಯವಿರುವಂತೆಯೂ ಹೈಕೋರ್ಟ್ ಸೂಚಿಸಿದೆ.