ಮಂಜೇಶ್ವರ : ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಭಾರತದ ಎರಡನೇ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ ನಡೆಯಿತು.
ಆ ಪ್ರಯುಕ್ತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಸೇವನಾ ವಾರಾಚರಣೆಯ ಭಾಗವಾಗಿ ಶಾಲಾ ಪರಿಸರ ಶುಚೀಕರಣ ನಡೆಸಲಾಯಿತು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ ಪಿ, ಶಾಲಾ ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ, ಅಶ್ವಿನಿ ಎಂ, ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಹಾಗೂ ಕಟ್ಟಡ ಸಮಿತಿಯ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಉಪಸ್ಥಿತರಿದ್ದರು.