ನವದೆಹಲಿ: ದೆಹಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
ನವದೆಹಲಿ: ದೆಹಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನೇಪಾಳದಲ್ಲಿ ಭೂಕಂಪ
ನೇಪಾಳದಲ್ಲಿ ಎರಡು ಬಾರಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಮಧ್ನಾಹ್ನ 2.25ಕ್ಕೆ ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ. ಇದಾದ 25 ನಿಮಿಷಗಳ ಅಂತರದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.
ಮಧ್ಯಾಹ್ನ 1.18ಕ್ಕೆ ಹರಿಯಾಣದ ಸೋನಿಪತ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಕಂಪನದಿಂದಾಗಿ ದೆಹಲಿಯಲ್ಲಿ ಜನರು ಮನೆ ಹಾಗೂ ಕಚೇರಿಗಳಿಂದ ಹೊರಗಡೆ ಓಡಿದ್ದಾರೆ. ಭಾರತ ಹಾಗೂ ನೇಪಾಳದಲ್ಲಿ ತಕ್ಷಣಕ್ಕೆ ಯಾವುದೇ ಹಾನಿ ವರದಿಯಾಗಿಲ್ಲ.