ನವದೆಹಲಿ: ಹಮಾಸ್ ಬಂಡುಕೋರರು ಹಾಗೂ ಇಸ್ರೇಲ್ ಸೇನೆ ನಡುವಿನ ಸಂಘರ್ಷ ಏಳನೇ ದಿನವಾದ ಶುಕ್ರವಾರವೂ ಮುಂದುವರಿದಿದೆ. ಭಾರತದಲ್ಲೂ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ ಪೊಲೀಸರು ಗುರುವಾರ ತಡರಾತ್ರಿ ಗಸ್ತು ತಿರುಗಿದ್ದಾರೆ. ಜತೆಗೆ ನಗರದಲ್ಲಿರುವ ಯಹೂದಿ ಧಾರ್ಮಿಕ ಕೇಂದ್ರಗಳು ಮತ್ತು ಇಸ್ರೇಲ್ ರಾಯಭಾರ ಕಚೇರಿ ವ್ಯಾಪ್ತಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಸ್ರೇಲ್ -ಪ್ಯಾಲೆಸ್ಟೀನ್ ಸಂಘರ್ಷದ ಹಿನ್ನೆಲೆಯಲ್ಲಿ ಇಂಗ್ಲೆಂಡ್, ಅಮೆರಿಕ, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಫ್ರಾನ್ಸ್‌ನಲ್ಲಿ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಪ್ಯಾಲೆಸ್ಟೀನ್ ಪರ ಪ್ರತಿಭಟನೆಗಳನ್ನು ನಡೆಸದಂತೆ ನಿಷೇಧ ಹೇರಲಾಗಿದೆ.
ಇಸ್ರೇಲ್‌ನ 1,300ಕ್ಕೂ ಹೆಚ್ಚು ಜನರನ್ನು ಹಮಾಸ್ ಬಂಡುಕೋರರು ಹತ್ಯೆ ಮಾಡಿದ್ದಾರೆ.