HEALTH TIPS

ಭ್ರಷ್ಟಾಚಾರ ಮರೆಮಾಚುವ ಪ್ರಯತ್ನವೇ ಇಂಡಿಯಾ ಮೈತ್ರಿಕೂಟ: ಅನುರಾಗ್‌ ಠಾಕೂರ್

               ಮೀರ್‌ಪುರ: ವಿರೋಧ ಪಕ್ಷಗಳು ತಮ್ಮ ಭ್ರಷ್ಟಚಾರದ ಮುಖವಾಡವನ್ನು ಮರೆಮಾಚುವ ಪ್ರಯತ್ನದ ಭಾಗವಾಗಿ ಯುಪಿಎ ಮೈತ್ರಿಕೂಟಕ್ಕೆ I.N.D.I.A ಮೈತ್ರಿಕೂಟ ಎಂದು ಮರು ನಾಮಕರಣ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಗೂರ್‌ ವಾಗ್ದಾಳಿ ನಡೆಸಿದ್ದಾರೆ.

              ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಹಿಂದುಳಿದ ವರ್ಗಗಳ ಬಗ್ಗೆ ಹಗುರವಾಗಿ ಮಾತನಾಡಿದ ಪರಿಣಾಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಆಡಳಿತ ನಡೆಸಲು ವಿಫಲವಾಗಿರುವ ಅವರು, ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.


            ನರೇಂದ್ರ ಮೋದಿ ಸರ್ಕಾರವು ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಆದರೆ ಅವರು ( ಇಂಡಿಯಾ ಮೈತ್ರಿಕೂಟ) ಜಾತಿಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು ಶನಿವಾರ ತಡರಾತ್ರಿ ಆದೇಶ ಹೊರಡಿಸಿದೆ.

               ಬಿಹಾರದಲ್ಲಿ ಜಾತಿ ಸಮೀಕ್ಷೆಯ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ಆದೇಶ ಬಂದಿದೆ. ಈ ಮೂಲಕ ಜಾತಿ ಸಮೀಕ್ಷೆ ನಡೆಸುತ್ತಿರುವ ದೇಶದ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಲಿದೆ. ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

Hamirpur, Himachal Pradesh: Union Minister Anurag Thakur says, "...Opposition has nowhere to hide their corrupt face... So they changed the name of UPA to INDI Alliance...The kind of words Rahul Gandhi used for the OBC community is in front of the country...He had lost his Lok Sabha membership because of that...What will they do? When they have failed in administration, they are talking about caste...Modi government is committed to working for the poor..."

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries