ತಿರುವನಂತಪುರಂ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಧ್ಯ ಕೇರಳ, ದಕ್ಷಿಣ ಕೇರಳ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮಧ್ಯಾಹ್ನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.
ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಳಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಭಾನುವಾರ ಎಂಟು ಜಿಲ್ಲೆಗಳಲ್ಲಿ ಮತ್ತು ಸೋಮವಾರ ಒಂಬತ್ತು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.