ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂ. 49 ನೇತೃತ್ವದಲ್ಲಿ ಇತ್ತೀಚೆಗೆ ಸೈನಿಕನಾಗಿ ಆಯ್ಕೆಯಾದ ಕಾಲೇಜಿನ ಪೂರ್ವ ವಿದ್ಯಾರ್ಥಿ ಅಕ್ಷಯ್ ಕುಮಾರ್ ರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಕೇಶವ ಶರ್ಮಾ, ಸಿಬ್ಬಂದಿ ಕಾರ್ಯದರ್ಶಿ ಶ್ರೀನಿಧಿ ಕೆ. ಅತಿಥಿಗಳಾಗಿ ಭಾಗವಹಿಸಿದ್ದರು. ಯೋಧ ಅಕ್ಷಯ್ ಕುಮಾರ್ ತರಬೇತಿ ಅವಧಿಯ ಅನುಭವವನ್ನು ಹಂಚಿಕೊಂಡರು. ಎನ್ನೆಸ್ಸೆಸ್ ಯೋಜನಾಧಿಕಾರಿ ಕಾವ್ಯಚಂದ್ರನ್ ಸ್ವಾಗತಿಸಿ, ಸ್ವಯಂಸೇವಕಿ ವಿನುತಾ ವಂದಿಸಿದರು.