ತಿರುವನಂತಪುರ: ರಾಜ್ಯದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಸಣ್ಣ ಈರುಳ್ಳಿ, ಬೆಳ್ಳುಳ್ಳಿ ಬೆಲೆ 100 ದಾಟಿದೆ.
ಸಣ್ಣ ವ್ಯಾಪಾರಿಗಳು 120 ರೂ.ವರೆಗೆ ಈರುಳ್ಳಿ ವಿಕ್ರಯಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಸರಕುಗಳ ಆಗಮನ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.
ನವರಾತ್ರಿ ಆಚರಣೆಯಿಂದಾಗಿ ಪ್ರತಿದಿನ ಮಹಾರಾಷ್ಟ್ರದಿಂದ ಆಗಮಿಸುವ ಲಾರಿಗಳ ಸಂಖ್ಯೆ ಕಡಿಮೆಯಾಗಿದೆ. ಮಳೆಯಿಂದ ಈರುಳ್ಳಿ ಬೆಳೆ ಹಾನಿಯೂ ಬೆಲೆ ಏರಿಕೆಗೆ ಕಾರಣವಾಗಿದೆ.
ನವರಾತ್ರಿ ಸಂಭ್ರಮ ಮುಗಿಲು ಮುಟ್ಟಿದ್ದು, ಬೆಲೆ ಕಡಿಮೆಯಾಗುವುದಿಲ್ಲ ಎನ್ನುತ್ತಾರೆ ವ್ಯಾಪಾರಿಗಳು. ಕೆಲವು ತರಕಾರಿ ಬೆಲೆ ಇಳಿಕೆಯಾದ ನಂತರ ಈರುಳ್ಳಿ ಬೆಲೆ ಏರಿಕೆಯಾಗಿದೆ.