ಶ್ರೀನಗರ: ಸೇನಾ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು -ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ: ಸೇನಾ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು -ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೃತಪಾಲ್ ಸಿಂಗ್ ಮೃತ ಯೋಧ. ಅವರನ್ನು ಮ್ಯಾನ್ಕೊಟೆ ಸೆಕ್ಟರ್‌ನಲ್ಲಿ ಫಾರ್ವರ್ಡ್ ಪೋಸ್ಟ್‌ಗೆ ನಿಯೋಜನೆ ಮಾಡಲಾಗಿತ್ತು.
ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ತಗುಲಿ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂದಿದ್ದಾರೆ.