ಭೋಪಾಲ್: ಕೇಂದ್ರ ಸಚಿವ ಅಮಿತ್ ಶಾ ಅವರು ಅಧಿಕಾರಿಗಳಿಗೆ ಬೆದರಿಕೆಯೊಡ್ಡುವಂಥ ಹೇಳಿಕೆ ನೀಡಿದ್ದಾರೆ ಎಂದು ಅರೋಪಿಸಿರುವ ಕಾಂಗ್ರೆಸ್ ಪಕ್ಷವು ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಭೋಪಾಲ್: ಕೇಂದ್ರ ಸಚಿವ ಅಮಿತ್ ಶಾ ಅವರು ಅಧಿಕಾರಿಗಳಿಗೆ ಬೆದರಿಕೆಯೊಡ್ಡುವಂಥ ಹೇಳಿಕೆ ನೀಡಿದ್ದಾರೆ ಎಂದು ಅರೋಪಿಸಿರುವ ಕಾಂಗ್ರೆಸ್ ಪಕ್ಷವು ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಬಿಜೆಪಿ ಮುಖ್ಯಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ 'ಕಮಲಕ್ಕೆ (ಬಿಜೆಪಿ) ಸಹಕಾರ ನೀಡದ ಅಧಿಕಾರಿಗಳ ಕುರಿತು ಕನಿಕರ ತೋರುವಂತಿಲ್ಲ' ಎಂದು ಅಮಿತ್ ಶಾ ಅವರು ಪಕ್ಷದ ಪಾಧಿಕಾರಿಗಳಿಗೆ ಹೇಳಿದ್ದರು ಎಂದು ಸುದ್ದಿಪತ್ರಿಕೆಯೊಂದು ವರದಿ ಮಾಡಿತ್ತು.
'ಅಮಿತ್ ಶಾ ಅವರ ಹೇಳಿಕೆಯು ರಾಜಕೀಯ ಪ್ರೇರಿತವಾಗಿವೆ. ಅಧಿಕಾರಿಗಳ ಮೇಲೆ ಒತ್ತಡ ತರುವ ಉದ್ದೇಶದಿಂದ ಅವರು ಹೀಗೆ ಹೇಳಿದ್ದಾರೆ. ಬಿಜೆಪಿಗೆ ಸಹಕಾರ ನೀಡದ ಅಧಿಕಾರಿಗಳ ಪಟ್ಟಿ ಮಾಡುವಂತೆ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ಒಂದುವೇಳೆ ಸುದ್ದಿಪತ್ರಿಕೆಯ ವರದಿಗಳು ಸುಳ್ಳು ಎಂದಾದರೆ ಪತ್ರಿಕೆ ವಿರುದ್ಧ ಬಿಜೆಪಿ ಕಾನೂನು ಕ್ರಮಕ್ಕೆ ಮುಂದಾಗಲಿ' ಎಂದು ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಅವರು ಹೇಳಿದ್ದಾರೆ.