ಕಾಸರಗೋಡು: ನೀತಿ ಆಯೋಗದ ಮಹತ್ವಾಕಾಂಕ್ಷೆಯ ಬ್ಲಾಕ್ ಕಾರ್ಯಕ್ರಮದ ಅಂಗವಾಗಿ ಪರಪ್ಪ ಬ್ಲಾಕ್‍ನಲ್ಲಿ ಆಯೋಜಿಸಲಾದ ಸಂಕಲ್ಪ ಸಪ್ತಾಹದ ಸಮಾರೋಪ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಪರಪ್ಪ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಉದ್ಘಾಟಿಸಿದರು.
ಪರಪ್ಪ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಎಂ. ಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸುಫಿಯಾನ್ ಅಹಮದ್ ಮುಖ್ಯ ಅತಿಥಿಯಾಗಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಸಿ.ಜೆ.ಸಜಿತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾಮ ಪಂಚಾಯಿತಿ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಟಿ.ಕೆ.ರವಿ, .ಕೋಡೋಂ ಬೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಶ್ರೀಜಾ, ಕಲ್ಲಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ.ನಾರಾಯಣನ್, ವೆಸ್ಟ್ ಎಳೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ಮೋಹನನ್, ಪನತ್ತಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸನ್ನ ಪ್ರಸಾದ್, ಈಸ್ಟ್ ಎಳೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೋಸೆಫ್ ಮುತ್ತೊಳಿಲ್, ಪರಪ್ಪ ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷ ಕೆ.ಭೂಪೇಶ್, ಕಿನಾನೂರು ಗ್ರಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ನಾಸರ್ ಉಪಸ್ಥಿತರಿದ್ದರು.
ಜಿಲ್ಲಾ ಯೋಜನಾಧಿಕಾರಿ ಟಿ. ರಾಜೇಶ್ ಸ್ವಾಗತಿಸಿದರು. ಎ.ಬಿ. ಪಿ ಬ್ಲಾಕ್ ಕೋರ್ ಸಮಿತಿ ಅಧ್ಯಕ್ಷ ಡಿ.ವಿ.ಅಬ್ದುಲ್ ಜಲೀಲ್ ವಂದಿಸಿದರು.
ಆಕರ್ಷಕ ಮೆರವಣಿಗೆ:
ಸಂಕಲ್ಪ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಸಮಾರಂಭ ವಏದಿಕೆ ಅಳವಡಿಸಿದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಕೃಷಿ, ಹೈನುಗಾರಿಕೆ, ಪಶು ಸಂಗೋಪನೆ, ಶುಚಿತ್ವ ಮಿಷನ್, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೈಗಾರಿಕೆ, ಮತ್ತಿತರ ಇಲಾಖೆಗಳ ಸದಸ್ಯರು, ಅಧಿಕಾರಿಗಳು, ನೌಕರರು, ಬ್ಲಾಕ್ ಮಟ್ಟದ ಅಧಿಕಾರಿಗಳು ಹಾಗೂ ನೌಕರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.