ತ್ರಿಶೂರ್: ರಾಜ್ಯ ಶಾಲಾ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ ಅಥ್ಲೀಟ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯ ಬಾಲಕರ ಲಾಂಗ್ ಜಂಪ್ ನಲ್ಲಿ ಈ ಘಟನೆ ನಡೆದಿದೆ. ವಯನಾಡಿನಿಂದ ಬಂದಿದ್ದ ಮುಹಮ್ಮದ್ ಸಿನಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುತ್ತಿಗೆಗೆ ತೀವ್ರ ಪೆಟ್ಟಾಗಿರುವ ಸಿನಾನ್ ಅವರನ್ನು ತಜ್ಞ ಚಿಕಿತ್ಸೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಜಿಗಿತವನ್ನು ಮುಗಿಸಿದ ಸಿನಾನ್ ಹಿಡಿತ ಸಿಗದೆ ಮುಂದೆ ಬಿದ್ದರು. ಬಿದ್ದ ರಭಸಕ್ಕೆ ಕುತ್ತಿಗೆಗೆ ಗಂಭೀರ ಗಾಯವಾಗಿದೆ.
ಪ್ರಾಥಮಿಕ ಪರೀಕ್ಷೆಯಲ್ಲಿ ಗಾಯ ಗಂಭೀರವಾಗಿದೆ ಎಂದು ಕಂಡು ಬಂದ ನಂತರ ಸಿನಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಾಗಿಲ್ಲ.
ಈ ಮಧ್ಯೆ ಕೆಲವು ಕ್ರೀಡಾ ಸ್ಪರ್ಧೆಗಳಲ್ಲಿ ಸುವ್ಯವಸ್ಥಿತ ಕ್ರಮಗಳನ್ನು ಅನುಸರಿಸಲಾಗಿಲ್ಲ ಎಂಬ ದೂರುಗಳೂ ಕೇಳಿಬಂದಿದೆ.