ಮೈಸೂರು: ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದ್ದು, ಅ. 9ರಂದು ಸಿಂಹಾಸನ ಜೋಡಣೆ ಕಾರ್ಯಗಳು ಸಾಗಲಿವೆ.
ಮೈಸೂರು: ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದ್ದು, ಅ. 9ರಂದು ಸಿಂಹಾಸನ ಜೋಡಣೆ ಕಾರ್ಯಗಳು ಸಾಗಲಿವೆ.
ಈ ಹಿನ್ನೆಲೆಯಲ್ಲಿ ನಿಗದಿತ ದಿನಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ.9ರಂದು ಬಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ.ಅ.15ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್, ಅ.23ರಂದು ಆಯುಧಪೂಜೆ ಪ್ರಯುಕ್ತ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಇನ್ನು ಅ.24ರಂದು ವಿಜಯದಶಮಿಯ ಅಂಗವಾಗಿ ಇಡೀ ದಿನ ಪ್ರವೇಶವಿರುವುದಿಲ್ಲ. ಸಿಂಹಾಸನ ವಿಸರ್ಜನೆ ಅಂಗವಾಗಿ ನ.8ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಯುವ ಸಂಭ್ರಮ
ಅಕ್ಟೋಬರ್ 6 ರಿಂದ 16ರವರಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ನಟರಾದ ವಸಿಷ್ಠ ಸಿಂಹ, ಹರಿಪ್ರಿಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದಿನಿಂದ ಪ್ರತಿದಿನ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.