ಬದಿಯಡ್ಕ : ಬದಿಯಡ್ಕ ಚಿನ್ಮಯ ವಿದ್ಯಾಲಯದ ವಾರ್ಷಿಕ ಕ್ರೀಡೋತ್ಸವ ಶಾಲಾ ಮೈದಾನದಲ್ಲಿ ಜರಗಿತು. ಶಾಲೆಯ ಮೇಲ್ವಿಚಾರಕ ಪ್ರಶಾಂತ ಬೆಳಿಂಜ ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆಯು ಮಾನವನ ವಿಕಾಸಕ್ಕೆ ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಸಹಕಾರಿ. ದೈಹಿಕ ಕ್ಷಮತೆ ಕಾಪಾಡಿಕೊಂಡಾಗ ಮಾತ್ರ ಶೈಕ್ಷಣಿಕ ವಲಯದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ಪಠ್ಯದೊಂದಿಗೆ ಕ್ರೀಡೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಮುಖ್ಯ ಶಿಕ್ಷಕಿ ಮಾನಸ ಉಪಸ್ಥಿತರಿದ್ದರು. ಕ್ರೀಡಾಜ್ಯೋತಿ ಹಸ್ತಾಂತರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಶಾಂತ್ ಬೆಳಿಂಜ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳಲ್ಲಿ ಆಯೋಜಿಸಲಾಗಿತ್ತು.