ಕಾಸರಗೋಡು: ಜಿಲ್ಲಾ ಬಂಟರ ಸಂಘವು ಬೆಂಗಳೂರು ಬಂಟರ ಸಂಘದ ಸಹಯೋಗದಲ್ಲಿ ನಡೆಸುತ್ತಿರುವ ವಿದ್ಯಾರ್ಥಿ ಸಹಾಯ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಅ. 8ರಂದು ಬೆಳಗ್ಗೆ 10ಕ್ಕೆ ಉಪ್ಪಳ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಜರುಗಲಿದೆ.
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಸ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸಮರಂಭ ಉದ್ಘಾಟಿಸುವರು. ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ವಿತರಣೆ ಸಮಿತಿ ಅಧ್ಯಕ್ಷ ಸದಾನಂದ ಸುಲಾಯ, ಹಿರಿಯ ವಕೀಲ ಶಂಕರ ಮೋಹನ ಪೂಂಜ, ಬಂಟರ ಯಾನೆ ನಾಡವರ ಮಾತೃ ಸಂಘದ ಕೋಶಾ ಧಿಕಾರಿ ಕೆ ಯೆ. ರಾಮ್ ಮೋಹನ ರೈ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ವಕೀಲ ಸುಬ್ಬಯ ರೈ ಅಧ್ಯಕ್ಷತೆ ವಹಿಸುವರು.
ವಿದ್ಯಾರ್ಥಿ ವೇತನಕ್ಕೆ ಮತ್ತು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಮಾಹಿತಿ ಪತ್ರವನ್ನು ಕಳುಹಿಸಲಾಗಿದ್ದು, ವಿದ್ಯಾರ್ಥಿಗಳು ಸಕಾಲದಲ್ಲಿ ಹಾಜರಾಗುವಂತೆ ತಿಳಿಸಲಾಗಿದೆ.
ಅಂದು ಮಧ್ಯಾಹ್ನ 3ಕ್ಕೆ ಕಾಸರಗೋಡು ಜಿಲ್ಲಾ ಬಂಟರ ಸಂಘದ ಮಹಾಸಭೆಯು ರಾಮಕೃಷ್ಣ ವಿದ್ಯಾಲಯದಲ್ಲಿ ನಡೆಯಲಿರುವುದಾಗಿ ಬಂಟರ ಸಂಗದ ಪ್ರಕಟಣೆ ತಿಳಿಸಿದೆ.