ಭೋಪಾಲ್: ತಾಂತ್ರಿಕ ದೋಷದಿಂದಾಗಿ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಹಳ್ಳಿಯೊಂದರಲ್ಲಿ ಇಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೋಪಾಲ್: ತಾಂತ್ರಿಕ ದೋಷದಿಂದಾಗಿ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಹಳ್ಳಿಯೊಂದರಲ್ಲಿ ಇಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೈಲಟ್ ಮತ್ತು ಐವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಸ್ಥಳದಲ್ಲಿದ್ದ ಬೆರಾಸಿಯಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನರೇಂದ್ರ ಕುಲಸ್ತೆ ತಿಳಿಸಿದ್ದಾರೆ.
ಭೋಪಾಲ್‌ನಿಂದ ಝಾನ್ಸಿಗೆ ತೆರಳುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.