HEALTH TIPS

ರಾಜಕೀಯ ಪಕ್ಷಗಳ ದೇಣಿಗೆ ಮೂಲದ ಮಾಹಿತಿ ಪಡೆಯುವ ಹಕ್ಕು ಜನರಿಗಿಲ್ಲ: ಕೇಂದ್ರ ಸರ್ಕಾರ

             ವದೆಹಲಿ: ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡುವ ಹಣದ ಮೂಲ ಕುರಿತು ಮಾಹಿತಿ ಪಡೆದುಕೊಳ್ಳುವ ಹಕ್ಕನ್ನು ಜನರು ಹೊಂದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

               ಅಟಾರ್ನಿ ಜನರಲ್ ಆರ್‌.ವೆಂಕಟರಮಣಿ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

              ಆ ಮೂಲಕ ಚುನಾವಣಾ ಬಾಂಡ್‌ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

'ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯು 'ಚೊಕ್ಕ ಹಣ'ವಾಗಿದ್ದು, ಸಂವಿಧಾನದ 19(1)(ಎ) ವಿಧಿಯಡಿ ಮಾಹಿತಿ ಪಡೆಯುವ ಹಕ್ಕನ್ನು ಜನರು ಹೊಂದಿಲ್ಲ. ಯಾವುದೇ ವಿಷಯ ಕುರಿತು ಹಾಗೂ ಎಲ್ಲ‌ವನ್ನು ತಿಳಿದುಕೊಳ್ಳುವ ಅನಿರ್ಬಂಧಿತ ಹಕ್ಕು ಎಂಬುದು ಇರುವುದಿಲ್ಲ' ಎಂದು ಅವರು ವಿವರಿಸಿದ್ದಾರೆ.

                ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು, ಚುನಾವಣಾ ಬಾಂಡ್‌ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಅ. 31ರಂದು ನಡೆಸಲಿದೆ. ಹೀಗಾಗಿ, ಅಟಾರ್ನಿ ಜನರಲ್ ಅವರು ಸಲ್ಲಿಸಿರುವ ಈ ಹೇಳಿಕೆಗೆ ಮಹತ್ವ ಬಂದಿದೆ.

               'ರಾಜಕೀಯ ಪಕ್ಷಗಳಿಗೆ ನೀಡುವ ಹಣದ ಮೂಲ ಕುರಿತ ಮಾಹಿತಿಯ ಗೋಪ್ಯತೆಯನ್ನು ಕಾಪಾಡಲಾಗುತ್ತದೆ. ದೇಣಿಗೆ ನೀಡುವವರಿಗೆ ಇಂತಹ ಗೋಪ್ಯತೆಯ ಪ್ರಯೋಜನವನ್ನು ‌ಈ ಯೋಜನೆ ನೀಡುತ್ತದೆ. ಅಲ್ಲದೇ, ಅಕ್ರಮ ಹಣವನ್ನು ನೀಡಲಾಗುವುದಿಲ್ಲ ಹಾಗೂ ತೆರಿಗೆಗೆ ಸಂಬಂಧಿಸಿದ ಕರಾರುಗಳಿಗೆ ಅನುಗುಣವಾಗಿಯೇ ದೇಣಿಗೆಯನ್ನು ನೀಡಲಾಗುತ್ತದೆ ಎಂಬುದನ್ನು ಯೋಜನೆಯು ಖಾತ್ರಿಪಡಿ‌ಸುತ್ತದೆ' ಎಂದೂ ವಿವರಿಸಿದ್ದಾರೆ.

              ಚುನಾವಣಾ ಬಾಂಡ್‌ ಯೋಜನೆ ಜಾರಿ ಕುರಿತು ಕೇಂದ್ರ ಸರ್ಕಾರ 2018ರ ಜನವರಿ 2ರಂದು ಅಧಿಸೂಚನೆ ಹೊರಡಿಸಿತ್ತು.

                ಈ ಯೋಜನೆಯ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್‌ ನಾಯಕಿ ಜಯಾ ಠಾಕೂರ್‌, ಸಿಪಿಎಂ ಸಲ್ಲಿಸಿರುವುದೂ ಸೇರಿದಂತೆ ನಾಲ್ಕು ಅರ್ಜಿಗಳು ಸಲ್ಲಿಕೆಯಾಗಿವೆ.

                ಚುನಾವಣಾ ಬಾಂಡ್‌ ಯೋಜನೆ ವಿಚಾರವಾಗಿ ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ 'ದೊಡ್ಡ ಕಾರ್ಪೋರೇಟ್‌ ಸಂಸ್ಥೆಗಳಿಂದ ಪಾರದರ್ಶಕವಲ್ಲದ ರೀತಿಯಲ್ಲಿ ರಹಸ್ಯವಾಗಿ ಹಾಗೂ ಪಿತೂರಿ ಮೂಲಕ ದೇಣಿಗೆಯನ್ನು ಸಂಗ್ರಹಿಸುವ ತನ್ನ ಉದ್ಧೇಶವನ್ನು ಬಿಜೆಪಿ ಸ್ಪಷ್ಟಪಡಿಸಿದೆ' ಎಂದಿದ್ದಾರೆ. ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡುವ ಹಣವು ಅಕ್ರಮವೆನಿಸುವುದಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿರುವ ಬೆನ್ನಲ್ಲೇ ಚಿ‌ದಂಬರಂ ಅವರು ಬಿಜೆಪಿ ವಿರುದ್ಧ ಈ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕೂಡ ಚಿದಂಬರಂ ಅವರಿಗೆ ತೀಕ್ಷ್ಣವಾದ ತಿರುಗೇಟು ನೀಡಿದೆ. 'ಪಾರದರ್ಶಕತೆ ಹಾಗೂ ಪ್ರಜಾತಾಂತ್ರಿಕ ರೀತಿಯಲ್ಲಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ವ್ಯವಸ್ಥೆಯನ್ನು ರೂಪಿಸುವ ಯಾವುದೇ ಪ್ರಯತ್ನಕ್ಕೆ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸುತ್ತಿರುವುದು ಶೋಚನೀಯ' ಎಂದು ಟೀಕಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries