ನವದೆಹಲಿ: ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವ ಅವಕಾಶವನ್ನು ಅರ್ಜಿದಾರರಿಗೆ ನೀಡುವಂತೆ ಎಲ್ಲ ರಾಜ್ಯಗಳ ಮಾಹಿತಿ ಆಯೋಗಗಳಿಗೆ (ಎಸ್‌ಐಸಿ) ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ನವದೆಹಲಿ: ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವ ಅವಕಾಶವನ್ನು ಅರ್ಜಿದಾರರಿಗೆ ನೀಡುವಂತೆ ಎಲ್ಲ ರಾಜ್ಯಗಳ ಮಾಹಿತಿ ಆಯೋಗಗಳಿಗೆ (ಎಸ್‌ಐಸಿ) ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಎಸ್‌ಐಸಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ದೂರುಗಳು ಮತ್ತು ಮನವಿಗಳ ವಿಚಾರಣೆಯನ್ನು ಎಸ್‌ಐಸಿಗಳು ಭೌತಿಕವಾಗಿ ನಡೆಸುವುದರ ಜೊತೆ ಡಿಜಿಟಲ್ ವೇದಿಕೆಗಳನ್ನು ಬಳಸಿ ನಡೆಸುವಂತೆಯೂ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.