HEALTH TIPS

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ `ಶಾಹಿದ್ ಲತೀಫ್’ ಪಾಕಿಸ್ತಾನದಲ್ಲಿ ಹತ್ಯೆ

              ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.

              ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ನಂತರ ಲತೀಫ್ ನನ್ನು 2010 ರಲ್ಲಿ ವಾಘಾ ಮೂಲಕ ಗಡಿಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಆತನನ್ನು ಬಂಧಿಸಲಾಗಿತ್ತು.

             ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದ. 1999ರಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಭಾಗಿಯಾಗಿದ್ದ.

                 2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಕಾರ್ಖಾನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ತನಿಖೆ ಹೇಳುತ್ತದೆ. ಭಾರತ ಸರ್ಕಾರದಿಂದ ಆತನನ್ನು ಮೋಸ್ಟ್​ ವಾಂಟೆಡ್ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು.

             41 ವರ್ಷದ ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಪ್ರಮುಖ ಸದಸ್ಯನಾಗಿದ್ದ. 2016ರ ಜನವರಿ 2ರಂದು ನಡೆದ ಪಠಾಣ್​ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಜೆಇಎಂ ಭಯೋತ್ಪಾದಕರನ್ನು ಪಠಾಣ್‌ಕೋಟ್‌ಗೆ ಕಳುಹಿಸಿದ್ದ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries