ಬದಿಯಡ್ಕ: ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಿಂಶತಿ ವರ್ಷಾಚರಣೆಯ ಅಂಗವಾಗಿ 2023ರ ಸಾಲಿನ 'ಭರವಸೆಯ ಬೆಳಕು' ಪುರಸ್ಕಾರವನ್ನು ಬದಿಯಡ್ಕದ ಚಿತ್ತರಂಜನ್ ಕಡಂದೇಲು ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು. ಯಕ್ಷಗಾನ ಸಹಿತ ವಿವಿಧ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಇವರು ಹರೀಶ್ ಕುಮಾರ್ ಮತ್ತು ಶಿಕ್ಷಕಿ ಜ್ಯೋತ್ಸ್ನಾ ಕಡಂದೇಲು ದಂಪತಿಗಳ ಪುತ್ರ. ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಕನ್ನಡ ಭವನ ಸ್ಥಾಪಕ ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪ್ರೊ.ಎ ಶ್ರೀನಾಥ್ ಮೊದಲಾದವರು ಉಪಸ್ಥಿತರಿದ್ದರು.