ಮುಳ್ಳೇರಿಯ: ಶಿವಳ್ಳಿ ಬ್ರಾಹ್ಮಣ ಸಭಾದ ಮುಳ್ಳೇರಿಯಾ ವಲಯದ ಆತಿಥ್ಯದಲ್ಲಿ ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ವಾರ್ಷಿಕ ಕ್ರೀಡೋತ್ಸವವನ್ನು ಭಾನುವಾರ ಮುಳ್ಳೇರಿಯದ ಗಣೇಶ್ ಒಳಾಂಗಣ ಕ್ರೀಡಾಂಗಣದಲ್ಲಿ ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ಗೋಪಾಲಕೃಷ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಅಧ್ಯಕ್ಷ ಮಂಜುನಾಥ ಟಿ ಕೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಕಾರ್ಯದರ್ಶಿ ಡಾ. ಸೀತಾರಾಮ ಕಡಮಣ್ಣಾಯ, ಶಿವಳ್ಳಿ ಬ್ರಾಹ್ಮಣ ಸಭಾದ ಮುಳ್ಳೇರಿಯ ವಲಯ ಅಧ್ಯಕ್ಷ ಡಾ. ಕೆ. ರವಿಪ್ರಸಾದ್, ಜಿಲ್ಲಾ ಖಜಾಂಜಿ ಶ್ರೀಪ್ರಕಾಶ್ ಪಾಂಗಣ್ಣಾಯ, ಕ್ರೀಡೋತ್ಸವ ಸಂಚಾಲಕ ಸುಧೀರ್ ಕಡಂಬಳಿತ್ತಾಯ, ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಹಾಗೂ ವಿವಿಧ ವಲಯಗಳ ಸದಸ್ಯರು ಮತ್ತು ಕ್ರೀಡಾಳುಗಳು ಭಾಗವಹಿಸಿದ್ದರು. ಸಂಘಟನೆಯ ಮುಳ್ಳೇರಿಯ ವಲಯ ಕಾರ್ಯದರ್ಶಿ ಕೆ ರಾಘವೇಂದ್ರ ಸ್ವಾಗತಿಸಿದರು. ಸಂಘಟನೆಯ ಮುಳ್ಳೇರಿಯ ವಲಯ ಕಾರ್ಯದರ್ಶಿ ರಾಜಾರಾಮ ಸರಳಾಯ ವಂದಿಸಿದರು. ನಂತರ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದ ಶಟಲ್ ಬ್ಯಾಂಡ್ಮಿಂಟನ್ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಸ್ಪರ್ಧಾ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ವಿತರಿಸಲಾಯಿತು.