ನವದೆಹಲಿ: ಹೆಣ್ಣಿನ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಮಸೂದೆಯನ್ನು ಪರಿಶೀಲಿಸುತ್ತಿರುವ ಸಂಸದೀಯ ಸಮಿತಿಗೆ ವರದಿ ಸಲ್ಲಿಸಲು ನೀಡಿದ್ದ ಗಡುವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗಿದೆ.

ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು, ಸಮಿತಿಗೆ ಮಸೂದೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನೀಡಿದ್ದ ಗಡುವನ್ನು 2024ರ ಜನವರಿ 24ರವರೆಗೆ ವಿಸ್ತರಿಸಿದ್ದಾರೆ ಎಂದು ರಾಜ್ಯಸಭೆಯ ಪ್ರಕಟಣೆಯಲ್ಲಿ ಮಂಗಳವಾರ ತಿಳಿಸಲಾಗಿದೆ.