ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು ಖ್ಯಾತ ಉದ್ಯಮಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಕೂಳೂರು ಕನ್ಯಾನ ಇವರು ಇದೀಗ ಶಿಲಾಮಯ ಮಹಾದ್ವಾರದ ನಿರ್ಮಾಣದ ಪ್ರಾಯೋಜಕತ್ವವನ್ನು ವಹಿಸಿದ್ದಾರೆ. ಇದಕ್ಕಾಗಿ ಒಂದು ಕೋಟಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಅವರು ಘೋಷಿಸಿದ್ದಾರೆ. ಇದರ ಹೊರತಾಗಿ ಅವರು ಈಗಾಗಲೇ ಶ್ರೀ ಕ್ಷೇತ್ರದ ರಾಜಾಂಗಣದ ಕಾಮಗಾರಿಗೆ ಎಪ್ಪತ್ತೈದು ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಇವರಿಗೆ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.