ಮುಂಬೈ: ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಬುಧವಾರ ಘೋಷಿಸಿದ್ದಾರೆ.
ಮುಂಬೈ: ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಬುಧವಾರ ಘೋಷಿಸಿದ್ದಾರೆ.
ಸೊಲ್ಹಾಪುರ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ಸ್ಪರ್ಧಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.
ದಲಿತ ನಾಯಕ ಶಿಂಧೆ(82) ಅವರು ಸುಮಾರು ಆರು ದಶಕಗಳ ರಾಜಕೀಯ ಜೀವನದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.
ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿ ಮತ್ತು ಅವಿಭಜಿತ ಆಂಧ್ರಪ್ರದೇಶದ ರಾಜ್ಯಪಾಲರಾಗಿಯೂ ಶಿಂಧೆ ಕಾರ್ಯನಿರ್ವಹಿಸಿದ್ದರು. 2014ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದರು.
ಶಿಂಧೆ ಅವರ ಪುತ್ರಿ ಪ್ರಣಿತಿ ಶಿಂಧೆ (42) ಸೊಲ್ಹಾಪುರ ನಗರ ಕೇಂದ್ರ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.