ನವದೆಹಲಿ: ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಿಢೀರ್ ದಾಳಿ ನಡೆಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ಕಾರಣದಿಂದ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ಗೆ ಹೋಗುವ ಮತ್ತು ಅಲ್ಲಿಂದ ಬರುವ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಅಕ್ಟೋಬರ್ 14ರವರೆಗೆ ಇಸ್ರೇಲ್‌ಗೆ ವಿಮಾನಗಳ ಹಾರಾಟವನ್ನು ಏರ್ ಇಂಡಿಯಾ ರದ್ದುಪಡಿಸಿದೆ.
'ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ 2023 ರ ಅಕ್ಟೋಬರ್ 14 ರವರೆಗೆ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು' ಎಂದು ಏರ್‌ಲೈನ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
'ಈ ಅವಧಿಯಲ್ಲಿ ವಿಮಾನ ಬುಕ್ಕಿಂಗ್ ಮಾಡಿರುವ ಪ್ರಯಾಣಿಕರಿಗೆ ಏರ್‌ಲೈನ್ ಸಂಪೂರ್ಣ ಬೆಂಬಲ ನೀಡಲಿದೆ' ಎಂದು ವಕ್ತಾರರು ತಿಳಿಸಿದ್ದಾರೆ.
ವಾರದಲ್ಲಿ ಐದು ದಿನ ಪೂರ್ಣ ಪ್ರಮಾಣದಲ್ಲಿ ಟೆಲ್ ಅವೀವ್‌ಗೆ ದೆಹಲಿಯಿಂದ ವಿಮಾನ ಸಂಚಾರ ನಡೆಯುತ್ತಿತ್ತು.
ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಶನಿವಾರ ಇಸ್ರೇಲ್‌ಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.