ನವದೆಹಲಿ: ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಕಾರ್ಯಕರ್ತರು ರಾಜ್‌ಘಾಟ್‌ನಲ್ಲಿ ಸೋಮವಾರ ಧರಣಿ ನಡೆಸಿದರು.
ನವದೆಹಲಿ: ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಕಾರ್ಯಕರ್ತರು ರಾಜ್‌ಘಾಟ್‌ನಲ್ಲಿ ಸೋಮವಾರ ಧರಣಿ ನಡೆಸಿದರು.
ಪಕ್ಷದ ಶಾಸಕರು, ಸಂಸದರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ರಾಜ್ಯಕ್ಕೆ ನೀಡಬೇಕಾದ ₹15,000 ಕೋಟಿಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಟಿಎಂಸಿ ಆರೋಪಿಸಿದೆ.
ಪಕ್ಷದ ವಕ್ತಾರ ವಿಶ್ವಜಿತ್ ದೇವ್ ಅವರು, 'ಗ್ರಾಮೀಣ ಭಾಗದಲ್ಲಿ ಉದ್ಯೋಗ ಒದಗಿಸುವ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಮಾಡುವ ಅವಮಾನ. ಇದು ಪ್ರಜಾಪ್ರಭುತ್ವವೇ, ಕೇಂದ್ರ ಸರ್ಕಾರವು ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ' ಎಂದು ಆರೋಪಿಸಿದರು.