ಎರ್ನಾಕುಳಂ: ಡಾ. ವಂದನಾ ದಾಸ್ ಹತ್ಯೆ ಪ್ರಕರಣದಲ್ಲಿ ಆರೋಪಿಯ ಚಾರ್ಜ್‍ಶೀಟ್ ಓದದಂತೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್‍ನಲ್ಲಿ ಸಿಬಿಐ ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಯ ಹಿನ್ನೆಲೆಯಲ್ಲಿ ನ್ಯಾಯಾಲಯದ ಈ ಕ್ರಮ ಕೈಗೊಳ್ಳಲಾಗಿದೆ.
ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ ಎಂದು ವಂದನಾ ಪೋಷಕರು ನ್ಯಾಯಾಲಯವನ್ನು ಪ್ರಶ್ನಿಸಿದರು. ತನಿಖೆಯ ಕುರಿತು ಪೋಷಕರ ದೂರಿನ ಬಗ್ಗೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಡಿಜಿಪಿ ನ್ಯಾಯಾಲಯಕ್ಕೆ ತಿಳಿಸಿದರು.
ವಂದನಾ ದಾಸ್ ಹತ್ಯೆಯಲ್ಲಿ ಪೋಲೀಸರು ಗಂಭೀರವಾಗಿ ವಿಫಲರಾಗಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿತ್ತು. ಡಿಐಜಿ ನಿಶಾಂತಿನಿ ಅವರು ಕೊಲ್ಲಂ ಗ್ರಾಮಾಂತರ ಎಸ್ಪಿ ಸಲ್ಲಿಸಿದ ತನಿಖಾ ವರದಿ ಆಧರಿಸಿ ತಪ್ಪಿತಸ್ಥ ಪೋಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದರು. ಪೂಯಂಪಲ್ಲಿ ಠಾಣೆಯ ಎಸ್‍ಐ ಬೇಬಿ ಮೋಹನ್ ಮತ್ತು ಆಸ್ಪತ್ರೆಯಲ್ಲಿ ಪೋಸ್ಟ್ ಡ್ಯೂಟಿಯಲ್ಲಿದ್ದ ಮಣಿಲಾಲ್ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.