ಉಪ್ಪಳ: ಮಕ್ಕಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಪೂರೈಸಿ ಉತ್ತಮ ನಾಗರಿಕರಾಗಿ ಜೀವನವನ್ನು ರೂಪಿಸಲು ಬಂಟರ ಸಂಘ ನೀಡುತ್ತಿರುವ ವಿದ್ಯಾರ್ಥಿ ವೇತನ ಪೂರಕ ವಾಗಿರಲೆಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಭಿಪ್ರಾಯಪಟ್ಟರು.
ಅವರು ಕಾಸರಗೋಡು ಜಿಲ್ಲಾ ಬಂಟರ ಸಂಘ ಮತ್ತು ಬೆಂಗಳೂರು ಬಂಟರ ಸಂಘದ ಸಹಯೋಗದಲ್ಲಿ ಉಪ್ಪಳ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ ಸಮಾರಂಭವನ್ನ ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ಬೆಂಗಳೂರು ಬ0ಟರ ಸಂಘದ ವಿದ್ಯಾರ್ಥಿ ವೇತನ ವಿತರಣಾ ಸಮಿತಿ ಅಧ್ಯಕ್ಷ ಸದಾನಂದ ಸುಲಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದ ವಿದ್ಯಾರ್ಥಿಗಳು ಐ.ಪಿ.ಎಸ್., ಐ.ಎ.ಎಸ್. ಉನ್ನತ ಶಿಕ್ಷಣವನ್ನ ಪಡೆದು ಬಂಟ ಸಮಾಜದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿವಲ್ಲಿ ಪ್ರಮುಖ ಪಾತ್ರವನ್ನ ವಹಿಸಬೇಕೆಂದು ಹೇಳಿದರು ಇದಕ್ಕೆ ಬೆಂಗಳೂರು ಬಂಟರ ಸಂಘವು ಸಹಾಯ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು
ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಬಿ. ಸುಬ್ಬಯ ರೈ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಭಾಗವಹಿಸಿ ಅ. 28 ಮತ್ತು 29 ರಂದು ಉಡುಪಿಯಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನ ಕಾರ್ಯಕ್ರಮದ ವಿವರಣೆಯನ್ನು ನೀಡಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಕಾಸರಗೋಡು ವಲಯ ಬಂಟರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಕುಚ್ಚಿಕಾಡು, ಕುಂಬಳೆ ಪಿರ್ಕಾ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಳಮಲೆ ಮುಂತಾದವರು ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ರೈ ಕೆ ಸ್ವಾಗತಿಸಿ, ಕೋಶಾಧಿಕಾರಿ ಚಿದಾನಂದ ಆಳ್ವ ವಂದಿಸಿದರು. ಶ್ಯಾಮಲ ಶೆಟ್ಟಿ, ಚಂದ್ರಾಹಾಸ ರೈ ಪಿಜಿ, ಕಿರಣ ಮಾಡ ಹೊಸಮನೆ ಉಪಸ್ಥಿತರಿದ್ದರು. ಸುಧೀರ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು.