ಕಾಸರಗೋಡು : ಹಿರಿಯ ವ್ಯಕ್ತಿಗಳ ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಸಾಮಾಜಿಕ ನ್ಯಾಯ ಇಲಾಖೆ ಜಿಲ್ಲಾ ಕಛೇರಿ ವತಿಯಿಂದ ಜಿಲ್ಲಾ ಮಟ್ಟದ ಹಿರಿಯರ ದಿನವನ್ನು ಆಚರಿಸಲಾಯಿತು.
ಹೊಸದುರ್ಗ ತಾಲೂಕು ಸಮ್ಮೇಳನ ಸಭಾಂಗಣದಲ್ಲಿ ನಡೆದ ಹಿರಿಯರ ದಿನಾಚರಣೆಯನ್ನು ಶಾಸಕ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು.
ಕಾಞಂಗಾಡು ನಗರಸಭಾ ಅಧ್ಯಕ್ಷೆ ಕೆ.ವಿ.ಸುಜಾತಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜಿಲ್ಲಾ ಹಿರಿಯರ ಪರಿಷತ್ ಸದಸ್ಯರಾದ ಕೂತ್ತೂರು ಕಣ್ಣನ್, ಪಿ.ವಿ.ಕೃಷ್ಣನ್, ಎ.ನಾರಾಯಣನ್, ಟಿ.ಕೆ.ಬಾಲಕೃಷ್ಣನ್, ಇ.ಲಕ್ಷ್ಮಿ, ಬಾಲನ್ ಒಲಿಯಕಲ್ ಉಪಸ್ಥಿತರಿದ್ದರು. ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ ರಾಜ್ ಸ್ವಾಗತಿಸಿದರು. ಮೇಲ್ವಿಚಾರಕ ಅಬ್ದುಲ್ಲಾ ವಂದಿಸಿದರು. ಕಾರ್ಯಕ್ರಮದಲ್ಲಿ ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಸಿ.ಎಚ್.ಅಬ್ದುಲ್ಲಾ ಅವರನ್ನು ಶಾಸಕ ಚಂದ್ರಶೇಖರನ್ ಸನ್ಮಾನಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕøತಿಕ ವಐವಿಧ್ಯ ನಡೆಯಿತು.