ಬೀಜಿಂಗ್: ಗಾಜಾ ಪಟ್ಟಿಯಲ್ಲಿ ಹಮಾಸ್ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಯುದ್ಧ ಮುಂದುವರಿಸಿದೆ. ಈ ನಡುವೆ ಚೀನಾ ರಾಜಧಾನಿ ಬೀಜಿಂಗ್‌ನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಅಧಿಕಾರಿಗಳ ಮೇಲೆ ಶುಕ್ರವಾರ ಹಲ್ಲೆ ನಡೆದಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಬೀಜಿಂಗ್: ಗಾಜಾ ಪಟ್ಟಿಯಲ್ಲಿ ಹಮಾಸ್ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಯುದ್ಧ ಮುಂದುವರಿಸಿದೆ. ಈ ನಡುವೆ ಚೀನಾ ರಾಜಧಾನಿ ಬೀಜಿಂಗ್‌ನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಅಧಿಕಾರಿಗಳ ಮೇಲೆ ಶುಕ್ರವಾರ ಹಲ್ಲೆ ನಡೆದಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಹಲ್ಲೆಯಿಂದಾಗಿ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ದಾಳಿಯು ರಾಯಭಾರ ಕಚೇರಿಯ ಆವರಣದೊಳಗೆ ಸಂಭವಿಸಿಲ್ಲ, ಏಕೆಂದರೆ ರಾಯಭಾರ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಳನೇ ದಿನಕ್ಕೆ ಕಾಲಿಟ್ಟ ಯುದ್ಧ ಹಮಾಸ್ ಬಂಡುಕೋರರು ಹಾಗೂ ಇಸ್ರೇಲ್ ಸೇನೆ ನಡುವಿನ ಸಮರದ ಏಳನೇ ದಿನವಾದ ಶುಕ್ರವಾರವೂ ಮುಂದುವರಿದಿದೆ.
ಇಸ್ರೇಲ್ ದಾಳಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಗಾಜಾ ಪಟ್ಟಿಗೆ ಅಗತ್ಯ ವೈದ್ಯಕೀಯ ಮತ್ತು ಮಾನವೀಯ ನೆರವು ನೀಡುವಂತೆ ಪ್ಯಾಲೆಸ್ಟೀನ್‌ನ ಹಮಾಸ್ ಬಂಡುಕೋರರು ಅಂತರರಾಷ್ಟ್ರೀಯ ಪರಿಹಾರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.
ಇಸ್ರೇಲ್ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರ ಆದೇಶದಂತೆ ಹಮಾಸ್ ಹಿಡಿತದಲ್ಲಿರುವ ಗಾಜಾ ಪಟ್ಟಿಯ ಸುತ್ತ ಮುತ್ತಿಗೆ ಹಾಕಿ, ಸಂಪೂರ್ಣ ದಿಗ್ಬಂಧನ ಹೇರಲಾಗಿದೆ. ಜತೆಗೆ ವಿದ್ಯುತ್, ಆಹಾರ ಮತ್ತು ಇಂಧನ ಪೂರೈಕೆಯನ್ನು ನಿಲ್ಲಿಸಲಾಗಿದೆ.
ಗಾಜಾ ಪ್ರದೇಶವು ತನ್ನ ಮೂಲಭೂತ ಅಗತ್ಯಗಳಿಗಾಗಿ ಇಸ್ರೇಲ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈಗ ಮೂಲಭೂತ ಸೌಕರ್ಯಗಳೂ ದೊರೆಯದಿರುವುದು ಗಾಜಾದಲ್ಲಿರುವ 23 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ. ಆಹಾರ ಮತ್ತು ಇಂಧನದ ಕೊರತೆಯಿಂದಾಗಿ ಅಲ್ಲಿನ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.