ಜಮ್ಮು : ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿ ಮೇಲೆ ನಿರ್ಮಿಸುತ್ತಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

1.3 ಕಿ.ಮೀ ಉದ್ದದ ಸೇತುವೆಯು ನದಿಪಾತ್ರದಿಂದ 359 ಮೀಟರ್ ಎತ್ತರದಲ್ಲಿದೆ. ಅಂದರೆ ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರ ಇರಲಿದೆ. ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಸಂಪರ್ಕದ ಭಾಗವಾಗಿ ಈ ಸೇತುವೆ ನಿರ್ಮಾಣವಾಗುತ್ತಿದೆ.
'ಮುಖ್ಯ ಕಾರ್ಯದರ್ಶಿ ಎ.ಕೆ.ಮೆಹ್ತಾ ಮತ್ತಿತರ ಅಧಿಕಾರಿಗಳು ಶನಿವಾರ ಜ್ಯೋತಿಪುರಂಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಅತ್ಯಂತ ಸವಾಲಿನ ಕೆಲಸವನ್ನು ಪೂರ್ಣಗೊಳಿಸುತ್ತಿರುವ ಸಿಬ್ಬಂದಿಯನ್ನು ಶ್ಲಾಘಿಷಿಸಿದರು. ವಾಸ್ತುಶಿಲ್ಪ ವಿಸ್ಮಯವನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಿ ಎಂಬುದಾಗಿ ಸೂಚಿಸಿದರು' ಎಂದು ಹೇಳಿದರು.