ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪುತ್ತಿಗೆ ಗ್ರಾಮ ಪಂಚಾಯತಿ ಬಾಡೂರು ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಅನುμÁ್ಠನಗೊಳ್ಳುತ್ತಿರುವ ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯೋಜನೆಯ ಕಾಮಗಾರಿಯನ್ನು ಶಾಸಕ ಎ.ಕೆ.ಎಂ.ಅಶ್ರಫ್ ಸೋಮವಾರ ಉದ್ಘಾಟಿಸಿದರು.
ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯೋಜನೆಯು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಮತ್ತು ಮೂವತ್ತು ಅಥವಾ ಅದಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳು ವಾಸಿಸುವ ಕಾಲೋನಿಗಳ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ವಿವಿಧ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆಯಿಂದ ಜಾರಿಗೊಳಿಸಲಾದ ಯೋಜನೆಯಾಗಿದೆ.
ಪುತ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್, ಪುತ್ತಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಅನಿತಾ, ಪಿ.ಪ್ರೇಮ, ಕೇಶವ, ಜಿಲ್ಲಾ ಪರಿಶಿಷ್ಟ ಜಾತಿ ಸಲಹಾ ಸಮಿತಿ ಸದಸ್ಯರಾದ ರಾಮಚಂದ್ರ ಮಾಸ್ತರ್, ಸದಾನಂದ ಶೇಣಿ, ಕಾಲೋನಿ ಪ್ರತಿನಿಧಿಗಳಾದ ಚನಿಯ ಪಾಡಿ, ದಿವಾಕರ, ಲಾವಣ್ಯಾಕ್ಷಿ ಮಾತನಾಡಿದರು. ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಮೀನಾರಾಣಿ ಸ್ವಾಗತಿಸಿ, ಮಂಜೇಶ್ವರ ಬ್ಲಾಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ತಿರುಮಲೇಶ್ ವಂದಿಸಿದರು. 59 ಮನೆಗಳ ನವೀಕರಣ, ಸಮುದಾಯ ಭವನ ನವೀಕರಣ, ರಸ್ತೆ ಕಾಂಕ್ರೀಟ್, ಕುಡಿಯುವ ನೀರಿನ ಸೌಲಭ್ಯ, ಸೋಲಾರ್ ಲೈಟ್ ಯೋಜನಾ ಅನುಷ್ಠಾನಗಳಿಗೆ ಒಟ್ಟು 98,65,128 ಮಂಜೂರಾಗಿದೆ. ಜಿಲ್ಲಾ ಅಭಿವೃದ್ಧಿ ಕೇಂದ್ರವು ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ.