ಕುಂಬಳೆ: ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅವರು ಕುಂಬಳೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದರು. ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಪಂಚಾಯಿತಿ ವ್ಯಾಪ್ತಿಯ ಪ್ರದೇಶಾಭಿವೃದ್ಧಿ ಸಮಸ್ಯೆಗಳು, ಕುಡಿಯುವ ನೀರಿನ ಸಮಸ್ಯೆಗಳು, ಲೋಕೋಪಯೋಗಿ ಇಲಾಖೆ ರಸ್ತೆಗಳು ಸಹಿತ ವಿವಿಧ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಜಿಲ್ಲಾಧಿಕಾರಿ ಎದುರು ಮಂಡಿಸಿದರು.
ಕುಂಬಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಯು.ಪಿ. ತಾಹಿರಾ, ಉಪಾಧ್ಯಕ್ಷ ನಾಸಿರ್ ಮೊಗ್ರಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ರಹಮಾನ್ ಆರಿಕ್ಕಾಡಿ, ಸಬೂರ, ನಸೀಮಾ ಖಾಲಿದ್, ಪಂಚಾಯತಿ ಕಾರ್ಯದರ್ಶಿ ವಿರಾಜ್ ತಂಬುರಾನ್ ಮೊದಲಾದವರು ಉಪಸ್ಥಿತರಿದ್ದರು.