ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆ ಸಂದರ್ಭ ಬಿಎಸ್‍ಪಿ ಅಭ್ಯರ್ಥಿಯೊಬ್ಬರಿಗೆ ಲಂಚದ ಆಮಿಷವೊಡ್ಡಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಬಗ್ಗೆ ಪೊಲೀಸರು ದಾಖಲಿಸಿಕೊಂಕಡಿರುವ ಪ್ರಕರಣವನ್ನು ರದ್ದುಪಡಿಸುವಂತೆ, ಪ್ರಕರಣದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ನಾಲ್ಕು ಮಂದಿ ಅ. 25ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ಆದೇಶಿದೆ.
ಲಂಚದ ಆಮಿಷ ಸುಳ್ಳು ಆರೋಪವಾಗಿದ್ದು, ಪ್ರಕರಣ ರದ್ದುಪಡಿಸುವಂತೆ ಕೆ. ಸುರೇಂದ್ರನ್, ವಿ. ಬಾಲಕೃಷ್ಣ ಶೆಟ್ಟಿ, ಯುವಮೋರ್ಚ ಮುಖಂಡ ಸುನಿಲ್ ನಾಯಕ್, ಮಣಿಕಂಠ ರೈ, ಲೋಕೇಶ್ ನೋಂಡ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಮಂಜೇಶ್ವರದಿಂದ ವಿಧಾನಸಭೆಗೆ ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸುಂದರ ಅವರಿಗೆ ನಾಮಪತ್ರ ಹಿಂದಕ್ಕೆ ಪಡೆಯಲು ಹಣ ಮತ್ತು ಮೊಬೈಲ್ ಲಂಚದ ರೂಪದಲ್ಲಿ ನೀಡಲಾಗಿತ್ತು ಎಂದು ಆರೋಪಿಸಿ ಸಿಪಿಎಂನ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ವಿ ರಮೇಶನ್ ಕೇಸು ನೀಡಿದ್ದರು.