ಕಾಸರಗೋಡು: ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾದ ಕಿರುಧಾನ್ಯಗಳ ಮಹತ್ವವನ್ನು ಹೊಸ ಪೀಳಿಗೆಗೆ ತಿಳಿಸಬೇಕಾದ ಅಗತ್ಯವಿದೆ ಎಂಬುದಾಗಿ ಬಂದರು, ಪ್ರಾಚ್ಯವಸ್ತು ಸಂಗ್ರಹಾಲಯ ಖಾತೆ ಸಚಿವ ಅಹಮದ್ ದೇವರಕೋವಿಲ್ ತಿಳಿಸಿದ್ದರೆ.
ಅವರು ಇರಿಯಣ್ಣಿ ಸರ್ಕಾರಿ ಹೈಯರ್ ಸಎಕೆಂಡರಿ ಶಾಲೆಯಲ್ಲಿ ನಡೆದ ಸಮಾರಂಬದಲ್ಲಿ ಕೇರಳ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ, ಹೈಯರ್ ಸೆಕೆಂಡರಿ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳಲ್ಲಿ ಜಾರಿಗೆ ತಂದಿರುವ 'ಶ್ರೀ ಅನ್ನ ಪೆÇೀಷಣ ಮಾಹ್' ಯೋಜನೆಯ ರಾಜ್ಯ ಮಟ್ಟದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉತ್ತಮ ರೋಗನಿರೋಧಕ ಶಕ್ತಿ ಹಾಗೂ ಜೀವನಶೈಲಿ ರೋಗಗಳಿಗೆ ಸೂಕ್ತ ಆಹಾರ ನೀಡುವ ಕಿರುಧಾನ್ಯಗಳನ್ನು ದಿನನಿತ್ಯದ ಆಹಾರದಲ್ಲಿ ಬಳಸಲು ಪ್ರಯತ್ನಿಸಬೇಕು. ಜೀವನಶೈಲಿ ರೋಗಗಳ ವಿರುದ್ಧ ಹೋರಾಡಲು, ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸಲು ಮತ್ತು ಹಳೇ ಕೃಷಿ ಸಂಸ್ಕøತಿಯನ್ನು ಪುನರುಜ್ಜೀವನಗೊಳಿಸಲು ಯೋಜನೆಯು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು. ಶಾಸಕ ಸಿ.ಎಚ್.ಕುಞಂಬು ಅಧ್ಯಕ್ಷತೆ ವಹಿಸಿದ್ದರು.
ವಿಶ್ವ ಕಿರುಧಾನ್ಯ ವರ್ಷದ ಅಂಗವಾಗಿ ಹೈಯರ್ ಸೆಕೆಂಡರಿ ವಿಭಾಗದಲ್ಲಿ 1455 ಶಾಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ಎನ್‍ಎಸ್‍ಎಸ್ ಘಟಕ ಕನಿಷ್ಠ 10 ಕೆಜಿ ರಾಗಿ ಉತ್ಪಾದಿಸುವ ಗುರಿ ಹೊಂದಲಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುವ ಕಿರುಧಾನ್ಯಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಭಾರತದ ಶಿಫಾರಸಿನ ಮೇರೆಗೆ ವಿಶ್ವಸಂಸ್ಥೆಯು 2023ನ್ನು ಅಂತಾರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಿದ್ದು, 'ಕಿರಿದಲ್ಲ ಕಿರುಧಾನ್ಯಗಳು' ಎಂಬ ಘೋಷಣೆಯೊಂದಿಗೆ ಕಿರುಧಾನ್ಯಗಳನ್ನು ದಿನನಿತ್ಯದ ಆಹಾರದಲ್ಲಿ ಬಳಸಿಕೊಳ್ಳಲು ವಿಶ್ವಸಂಸ್ಥೆಯ ಅಧೀನದಲ್ಲಿರುವ ವಿಶ್ವ ಆಹಾರ ಸಂಸ್ಥೆಯು ಸಂದೇಶವನ್ನು ಹರಡುವ ಮೂಲಕ ಈ ವರ್ಷವನ್ನು ವಿಶ್ವ ಕಿರುಧಾನ್ಯಗಳ ವರ್ಷವಾಗಿ ಆಚರಿಸುತ್ತಿದೆ.
ಮುಳಿಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ವಿ.ಮಿನಿ, ಕಾರಡ್ಕ ಬ್ಲಾಕ್ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕೆ.ನಾರಾಯಣನ್, ಮುಳಿಯಾರ್ ಗ್ರಾಮ ಪಂಚಾಯಿತಿ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರೈಸಾ ರಶೀದ್, ಮುಳಿಯಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ಪಿ.ರವೀಂದ್ರನ್, ನಾರಾಯಣಿಕುಟ್ಟಿ ಮೊದಲಾದವರು ಉಪಸ್ಥಿತರಿದ್ದರು.