HEALTH TIPS

IPC, CrPC, Evidence Act | ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕಾರ: ಅಮಿತ್ ಶಾ

              ಹೈದರಾಬಾದ್ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ನೂತನ ಮಸೂದೆಗಳನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

           ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಕೆಡೆಟ್‌ಗಳ ನಿರ್ಗಮನ ಪಥಸಂಚಲನದಲ್ಲಿ ಮಾತನಾಡಿದ ಅಮಿತ್ ಶಾ, 'ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದಿದ್ದ ಅಪರಾಧ ಕಾನೂನುಗಳನ್ನು ಭಾರತ ತ್ಯಜಿಸುತ್ತದೆ. ಹೊಸ ಭರವಸೆ ಮತ್ತು ಆತ್ಮವಿಶ್ವಾಸದೊಂದಿಗೆ ನೂತನ ಯುಗವನ್ನು ಪ್ರವೇಶಿಸುತ್ತದೆ' ಎಂದು ಹೇಳಿದ್ದಾರೆ.

               'ಈ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪರಿಶೀಲಿಸುತ್ತಿದೆ. ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಅಂಗೀಕರಿಸಲಾಗುವುದು' ಎಂದು ತಿಳಿಸಿದ್ದಾರೆ.

                'ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ' ಎಂದು ಅವರು ಹೇಳಿದರು.

                                        ಅಪರಾಧ ಕಾನೂನುಗಳಿಗೆ ಹೊಸರೂಪ...

               ಈಗಾಗಲೇ ಲೋಕಸಭೆಯಲ್ಲಿ ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಇಂಡಿಯನ್ ಎವಿಡನ್ಸ್ ಆಯಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಮೂರು ಕಾಯ್ದೆಗಳಲ್ಲಿ 300ಕ್ಕೂ ಹೆಚ್ಚು ಬದಲಾವಣೆಗಳನ್ನು ನೂತನ ಮಸೂದೆಗಳಲ್ಲಿ ತರಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries