ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ, ಮಿಜೋರಾಂ, ರಾಜಸ್ಥಾನ ಹಾಗೂ ತೆಲಂಗಾಣ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ₹1,760 ಕೋಟಿ ಮೌಲ್ಯದ ಡ್ರಗ್ಸ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.

ಮತದಾರರನ್ನು ಪ್ರೇರೇಪಿಸುವ ಉದ್ದೇಶದಿಂದ ಹಂಚಲು ಉದ್ದೇಶಿಸಲಾಗಿದ್ದ ನಗದು, ಮದ್ಯ ಮತ್ತು ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಆಯೋಗ ಹೇಳಿದೆ.
ಈ ರಾಜ್ಯಗಳಲ್ಲಿ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಶಪಡಿಸಿಕೊಂಡ ಪ್ರಮಾಣಕ್ಕಿಂತ 7 ಪಟ್ಟು (₹239.15 ಕೋಟಿ) ಹೆಚ್ಚಾಗಿದೆ ಎಂದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಅ.9ರಂದು ಚುನಾವಣೆ ಘೋಷಣೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸಗಢ ಮತ್ತು ಮಿಜೋರಾಂನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದಿದೆ. ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನ.25 ಮತ್ತು ನ.30ರಂದು ಮತದಾನ ನಡೆಯಲಿದೆ. ಡಿ.3ರಂದು ಈ ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.