ಮಂಜೇಶ್ವರ: ತಲಪಾಡಿ ವಲಯದ ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ನಡೆಯುವ 1766ನೇ ಮದ್ಯ ವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ನಿನ್ನೆ ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಮತ್ತು 1766 ನೇಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಕಡಂಬಾರ್ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಕಾರ್ಯಾಧ್ಯಕ್ಷ ಯಾದವ ಬಡಾಜೆ, ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲಾ ಭಾಗ್, ವ್ಯವಸ್ಥಾಪನ ಸಮಿತಿ ಕೋಶಾಧಿಕಾರಿ ರವಿ ಮುಡಿಮಾರ್, ಜನಜಾಗೃತಿ ವೇದಿಕೆ ಸದಸ್ಯ ಹರೀಶ್ ಶೆಟ್ಟಿ ಮಾಡ, ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಮಂಜೇಶ್ವರ ತಾಲೂಕಿನ ಕಾರ್ಯದರ್ಶಿ ರಾಮಕೃಷ್ಣ ಸಂತಡ್ಕ, ಸಮಿತಿಯ ಗೌರವ ಸಲಹೆಗಾರ ಯದುನಂದನ ಆಚಾರ್ಯ ಮತ್ತು ಮಜಿಬೈಲು ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಭಂಡಾರಿ, ವಲಯದ ಒಕ್ಕೂಟದ ಅಧ್ಯಕ್ಷರು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಕುಶಾಲಾಕ್ಷಿ ನಿರೂಪಿಸಿದರು. ವಲಯ ಮೇಲ್ವಿಚಾರಕ ಭಾಸ್ಕರ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಸುಖಲತ ವಂದಿಸಿದರು. ಡಿ.5 ರಿಂದ ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಶಿಬಿರ ಆಯೋಜನೆಗೊಂಡಿದೆ.