ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವೈತರ್ಣಾ ನದಿಯಲ್ಲಿ ಇಂದು (ಸೋಮವಾರ) ಬೆಳಗ್ಗೆ 20 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಗ್ ಬೋಟ್ ಮುಳುಗಿದೆ.
ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವೈತರ್ಣಾ ನದಿಯಲ್ಲಿ ಇಂದು (ಸೋಮವಾರ) ಬೆಳಗ್ಗೆ 20 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಗ್ ಬೋಟ್ ಮುಳುಗಿದೆ.
ಈವರೆಗೆ 18 ಜನ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಿಗ್ಗೆ 6 ಗಂಟೆ ಸುಮಾರಿಗೆ ಜೆಎನ್‌ಪಿಟಿ-ವಡೋದರಾ ಎಕ್ಸ್‌ಪ್ರೆಸ್‌ವೇ ನಿರ್ಮಾಣದಲ್ಲಿ ತೊಡಗಿರುವ ಕಂಪನಿಯ ಟಗ್ ಬೋಟ್‌ನಲ್ಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.
ನದಿಯ ಮಧ್ಯದಲ್ಲಿದ್ದಾಗ ಬೋಟ್ ಮಗುಚಿದ್ದು, ಎಲ್ಲಾ ಕಾರ್ಮಿಕರು ನದಿಗೆ ಬಿದ್ದಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ನಾಪತ್ತೆಯಾದ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸ್ಥಳೀಯರು ಹಾಗೂ ಮೀನುಗಾರರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.