ಕಣ್ಣೂರು: ತಲಶ್ಶೇರಿಯ ಶಾಲೆಯೊಂದರಲ್ಲಿ ಸುಮಾರು 20 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇಹ ನೋವು ಹಾಗೂ ತುರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲಶ್ಶೇರಿ ಸಕಾಈರಿ ಗಲ್ರ್ಸ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಈ ಪೈಕಿ 11 ಮಕ್ಕಳನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜೊತೆಗೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಇದು ಅಲರ್ಜಿ ಸಮಸ್ಯೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ.