ಅಹಮದಾಬಾದ್: ಗುಜರಾತ್‌ನ ವಿವಿಧಡೆ ಭಾನುವಾರ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು 20 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಹಮದಾಬಾದ್: ಗುಜರಾತ್‌ನ ವಿವಿಧಡೆ ಭಾನುವಾರ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು 20 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಾಜ್ಯದ ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಕೇವಲ 16 ಗಂಟೆಗಳಲ್ಲಿ 50 ರಿಂದ117 ಮಿಮೀ ಮಳೆ ದಾಖಲಾಗಿದೆ.
ಅಹಮದಾಬಾದ್‌ನ ಭಾರತೀಯ ಹವಾಮಾನ ಇಲಾಖೆಯ (ಎಎಂಡಿ) ನಿರ್ದೇಶಕಿ ಮನೋರಮಾ ಮೊಹಂತಿ ಅವರು ಇಂದು( ಸೋಮವಾರ) ಮಳೆ ಕಡಿಮೆಯಾಗಲಿದೆ. ಗುಜರಾತ್‌ನ ದಕ್ಷಿಣ, ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಈಶಾನ್ಯ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ರೂಪುಗೊಂಡಿರುವುದೇ ಅಕಾಲಿಕ ಮಳೆಗೆ ಕಾರಣವಾಗಿದೆ ಎಂದರು.