HEALTH TIPS

ಭಾರತ-ಆಸ್ಟ್ರೇಲಿಯಾ 2+2 ಸಚಿವರ ಚರ್ಚೆ ಸೋಮವಾರ

             ವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾದ 2+2 ಸಚಿವರ ಸಭೆಯು ಸೋಮವಾರ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಮತ್ತು ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಅವರು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ.

               ಸೋಮವಾರ ನಡೆಯಲಿರುವ 2+2 ಸಚಿವರ ಸಭೆ ವೇಳೆ ಭಾರತದ ನಿಯೋಗದ ನೇತೃತ್ವವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ವಹಿಸಲಿದ್ದಾರೆ. ಆ ಬಳಿಕ ಈ ನಾಲ್ವರು ಸಚಿವರು ಮಂಗಳವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

               ಆಸ್ಟ್ರೇಲಿಯಾದ ಈ ಇಬ್ಬರು ನಾಯಕರು ಅಥವಾ ಇಬ್ಬರ ಪೈಕಿ ಒಬ್ಬರು ಅಹಮದಾಬಾದ್‌ನಲ್ಲಿ ಭಾನುವಾರ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಭಾರತ ತಂಡದ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries