ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ)ದ ಕೋರಿಕೆಯ ಮೇರೆಗೆ ಮಹದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೋಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಧಿಕೃತ ಪ್ರಕಟಣೆ ಭಾನುವಾರ ತಿಳಿಸಿದೆ.
ಛತ್ತೀಸ್‌ಗಢ ಸರ್ಕಾರವು ಈ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸು ಅಧಿಕಾರ ಹೊಂದಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಮತ್ತು ನಿರ್ಬಂಧಿಸುವಂತೆ ನಮಗೆ ಮನಿವಿಯನ್ನು ಕಳುಹಿಸಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಆರೋಪಿಸಿದ್ದಾರೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(MeitY) ಮಹಾದೇವ್ ಬುಕ್ ಮತ್ತು ರೆಡ್ಡಿಅನ್ನಪ್ರೆಸ್ಟೊಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಮತ್ತು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಇಡಿ ಶಿಫಾರಸಿನ ನಂತರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ಆದೇಶದ ಪ್ರಕಾರ 21 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳು ಬಂದ್ ಆಗಲಿವೆ.
ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಲಿಂಕ್ ಮಾಡಲಾದ ಮನಿ ಲಾಂಡರಿಂಗ್ ನೆಟ್‌ವರ್ಕ್‌ಗಳ ವಿರುದ್ಧ ಛತ್ತೀಸ್‌ಗಢದಲ್ಲಿ ಇಡಿ ದಾಳಿ ನಡೆಸಿದ ಒಂದು ದಿನದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ.