ಕಾಸರಗೋಡು :ರಾಜ್ಯ ಸರಕಾರ, ಯುವಜನ ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸ್ಪೋರ್ಟ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸುವ ಕಾಸರಗೋಡು ಜಿಲ್ಲಾ ಮಟ್ಟದ ಸ್ಪೋರ್ಟ್ಸ್ ಸಮ್ಮಿಟ್ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕಲೆಕ್ಟರೇಟ್ ಕಾನ್ಫರೆನ್ಸ್ ಹಾಲ್‍ನಲ್ಲಿ ನಡೆಯಲಿದೆ. ಸಮ್ಮಿಟ್ ಶಾಸಕ ಎನ್.ಎ.ನೆಲ್ಲಿಕುನ್ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎ.ಕೆ.ಎಂ.ಅಶ್ರಫ್, ಸಿ.ಎಚ್.ಕುಂಞಂಬು, ಇ.ಚಂದ್ರಶೇಖರನ್, ಎಂ.ರಾಜಗೋಪಾಲನ್, ಚೆಂಗಳ ಪಂಚಾಯತ್ ಅಧ್ಯಕ್ಷ ಖಾದರ್ ಬದ್ರಿಯಾ, ಜಿಲ್ಲಾಧಿಕಾರಿ ಕೆ.ಇಂಬಶೇಖರ್, ರಾಜ್ಯ ಸ್ಪೋರ್ಟ್ಸ್ ಕೌನ್ಸಿಲ್ ಉಪಾಧ್ಯಕ್ಷ ಎಂ.ಆರ್.ರಂಜಿತ್, ಜಿಲ್ಲಾ ಸ್ಪೋರ್ಟ್ಸ್ ಕೌನ್ಸಿಲ್ ಉಪಾಧ್ಯಕ್ಷ ಪಿ.ಪಿ.ಅಶೋಕನ್ ಮಾಸ್ತರ್, ರಾಜ್ಯ ಸ್ಪೋರ್ಟ್ಸ್ ಕೌನ್ಸಿಲ್ ಪ್ರತಿನಿಧಿ ಟಿ.ವಿ.ಬಾಲನ್, ಜಿಲ್ಲಾ ಸ್ಪೋರ್ಟ್ಸ್ ಕೌನ್ಸಿಲ್ ಸೆಕ್ರೆಟರಿ ಕೆ.ವಿ.ಸುರೇಂದ್ರನ್ ಭಾಗವಹಿಸಲಿದ್ದಾರೆ.