ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ.
ಈ ಹಿಂದೆ ವರದಿ ಸಲ್ಲಿಸಲು ಎಎಸ್‌ಐಗೆ ನವೆಂಬರ್ 17 ರವರೆಗೆ ಸಮಯ ನೀಡಲಾಗಿತ್ತು. ಆದರೆ ಎಎಸ್ಐ ಪರ ವಕೀಲರು 15 ದಿನಗಳ ಕಾಲಾವಕಾಶ ಕೋರಿದ್ದರು.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ಸೂಚಿಸಿದ್ದಾರೆ.
ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.