ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಶುಕ್ರವಾರ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದೆ.
ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಶುಕ್ರವಾರ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದೆ.
ಮಸೀದಿ ಸಂಕೀರ್ಣದ ಸಮೀಕ್ಷೆಯು ಪೂರ್ಣಗೊಂಡಿದ್ದು, ತಾಂತ್ರಿಕ ವರದಿಗಳು ಇನ್ನಷ್ಟೇ ಬರಬೇಕಿದೆ.
ಸಮೀಕ್ಷೆಯು ಪೂರ್ಣಗೊಂಡಿದೆ. ಆದರೆ, ಸಮೀಕ್ಷೆ ಕಾರ್ಯಕ್ಕೆ ಬಳಸಿದ ಸಾಧನಗಳನ್ನು ವರದಿಯಲ್ಲಿ ಸೇರಿಸಬೇಕಿದೆ. ಹೀಗಾಗಿ ವರದಿ ಸಲ್ಲಿಸಲು ನವೆಂಬರ್ 17ರವರೆಗೆ ಸಮಯಾವಕಾಶ ಬೇಕು ಎಂದು ನವೆಂಬರ್ 2ರಂದು ನ್ಯಾಯಾಲಯಕ್ಕೆ ಎಎಸ್‌ಐ ತಿಳಿಸಿತ್ತು.
ಸಮೀಕ್ಷೆಯ ವರದಿ ಸಲ್ಲಿಸಲು ಅಕ್ಟೋಬರ್ 4ರಂದು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದ ನ್ಯಾಯಾಲಯವು, ಇದಕ್ಕಿಂತಲೂ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.