ನವದೆಹಲಿ: ಭಾರತೀಯ ಶ್ರೀಮಂತ ಆಹಾರ ಸಂಸ್ಕೃತಿಯನ್ನು ಜಗತ್ತಿಗೆ ಪ್ರದರ್ಶಿಸಲು ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯ ನ.3ರಿಂದ 5ರವರೆಗೆ 3 ದಿನಗಳ 'ವರ್ಲ್ಡ್ ಫುಡ್ ಇಂಡಿಯಾ 2023' ಕಾರ್ಯಕ್ರಮವನ್ನು ಆಯೋಜಿಸಿದೆ.
ನವದೆಹಲಿ: ಭಾರತೀಯ ಶ್ರೀಮಂತ ಆಹಾರ ಸಂಸ್ಕೃತಿಯನ್ನು ಜಗತ್ತಿಗೆ ಪ್ರದರ್ಶಿಸಲು ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯ ನ.3ರಿಂದ 5ರವರೆಗೆ 3 ದಿನಗಳ 'ವರ್ಲ್ಡ್ ಫುಡ್ ಇಂಡಿಯಾ 2023' ಕಾರ್ಯಕ್ರಮವನ್ನು ಆಯೋಜಿಸಿದೆ.
ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 23 ರಾಜ್ಯಗಳು ಮತ್ತು ವಿವಿಧ ದೇಶಗಳ 1200ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ ಎಂದು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ ಅನಿತಾ ಪ್ರವೀಣ್ ತಿಳಿಸಿದ್ದಾರೆ.
ಜಾಗತಿಕ ಮೆಗಾ ಫುಡ್ ಈವೆಂಟ್‌ನ 2ನೇ ಆವೃತ್ತಿಯಾದ 'ವರ್ಲ್ಡ್ ಫುಡ್ ಇಂಡಿಯಾ 2023' ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಸುಮಾರು 88 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜತೆಗೆ 6 ದೇಶಗಳ ಸಚಿವರು ಕೂಡ ಆಗಮಿಸಲಿದ್ದಾರೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಾಸ್ ಹೇಳಿದ್ದಾರೆ.
ನ.3ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನ.5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಮಾರೋಪ ಭಾಷಣ ಮಾಡಲಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ಅತ್ಯಂತ ಮಹತ್ವದ ಕಾರ್ಯಕ್ರಮ ಎಂದು ಪರಾಸ್ ಹೇಳಿದ್ದಾರೆ.
ಈ ಕಾರ್ಯಕ್ರಮದ ವಿಶೇಷವೆಂದರೆ ವಿಶ್ವದ ಅತಿ ಉದ್ದದ ದೋಸೆಯನ್ನು ತಯಾರಿಸಿ ಗಿನ್ನೆಸ್ ದಾಖಲೆ ನಿರ್ಮಿಸುವುದಾಗಿದೆ. 60 ರಿಂದ 80 ಬಾಣಾಸಿಗರು ಸೇರಿ 100 ಅಡಿ ಉದ್ದದ ರಾಗಿ ದೋಸೆಯನ್ನು ತಯಾರಿಸಲಿದ್ದಾರೆ.